ದೆಹಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ವಿಧಾನಸಭಾ ಚುನಾವಣೆಗೆ ಇಂದು ಸೀಟು ಹಂಚಿಕೆ ಪ್ರಕಟಿಸಿದೆ. ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಿತ್ರ ಪಕ್ಷಗಳು 13 ಸ್ಥಾನದಲ್ಲಿ ಸ್ಪರ್ಧಿಸಲಿದೆ.
ರಾಂಚಿಯ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ಎಜೆಎಸ್‌ಯು ಪಕ್ಷದೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಸೀಟು ಹಂಚಿಕೆಯನ್ನು ಪ್ರಕಟಿಸಿದ ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಜಾರ್ಖಂಡ್ ಚುನಾವಣಾ ಸಹ-ಪ್ರಭಾರಿ ಹಿಮಂತ ಬಿಸ್ವಾ ಶರ್ಮಾ, ‘ಎಜೆಎಸ್‌ಯು 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ನಾವು ಒಮ್ಮತಕ್ಕೆ ಬಂದಿದ್ದೇವೆ. ಜೆಡಿಯು ಎರಡು ಸ್ಥಾನಗಳಲ್ಲಿ ಮತ್ತು ಎಲ್‌ಜೆಪಿ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಉಳಿದ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಮತ್ತು ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರಲ್ಲದೆ ಎಜೆಎಸ್‌ಯು ಮುಖ್ಯಸ್ಥ ಸುದೇಶ್ ಮಹ್ತೋ ಮತ್ತು ಇತರ ಪಕ್ಷದ ನಾಯಕರು ಉಪಸ್ಥಿತರಿದ್ದರು.