ಬೆಂಗಳೂರು; ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಗದೆ ಸರೋಜಾ ಕೊನೆಯುಸಿರೆಳೆದರು.
ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು. ಅಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆಯಂತೆ.