ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಏನಪ್ಪ ಅಂದ್ರೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 486 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗ(KPSC) ಅವಕಾಶ ಕಲ್ಪಿಸಿದೆ.
ಕೊರೋನಾ ಸಂದರ್ಭದಲ್ಲಿ ಎಲ್ಲಾ ವರ್ಗದವರಿಗೂ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಅಧಿಸೂಚನೆಗಳಿಗೆ ಸಂಬಂಧಿಸಿದಂತೆ 486 ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಿ ಅಕ್ಟೋಬರ್ 30ರವರೆಗೆ ಅರ್ಜಿ ಸಲ್ಲಿಸಲು ಲೋಕಸೇವಾ ಆಯೋಗ ಅವಕಾಶ ಕಲ್ಪಿಸಿದೆ.
ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024. ದಿನಾಂಕ:10.09.2024ರಲ್ಲಿ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿರುವ ಹಿನ್ನೆಲೆಯಲ್ಲಿ ಮೇಲ್ಕಂಡ ಅಧಿಸೂಚನೆಗಳಲ್ಲಿನ ವಿವಿಧ ಗ್ರೂಪ್-ಸಿ ವೃಂದದ ಹುದ್ದೆಗಳಿಗೆ ಸಾಮಾನ್ಯ ಅರ್ಹತೆ- 38 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ- 41 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 43 ವರ್ಷಗಳು” ಎಂಬುದಾಗಿ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿ, ತಿದ್ದುಪಡಿ ಅಧಿಸೂಚನೆಯನ್ನು ದಿನಾಂಕ:14-10-2024 ರಂದು ಹೊರಡಿಸಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳಿಗೆ ದಿನಾಂಕ:15-10-2024 ರಿಂದ 30-10-2024 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದಿನಾಂಕ:14-10-2024ರ ತಿದ್ದುಪಡಿ ಅಧಿಸೂಚನೆ 25:15-03-2024 ರಡಿಯಲ್ಲಿ ಪರಿಶೀಲಿಸಿಕೊಳ್ಳಬಹುದೆಂದು ಈ ಮೂಲಕ ತಿಳಿಸಿದೆ.