ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಇಂದಿನಿಂದ ಅಕ್ಟೋಬರ್ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ದಕ್ಷಿಣ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು (ಅಕ್ಟೋಬರ್ 21) ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ,ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.