ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದಿಂದ ಡಿಕೆ ಸುರೇಶ್ ಹಾಗೂ ಸಂಡೂರು ಕ್ಷೇತ್ರದಿಂದ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರು ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗುತ್ತಿದೆ.
ಚನ್ನಪಟ್ಟಣಕ್ಕೆ ಡಿಕೆ ಸುರೇಶ್ 99% ಸ್ಪರ್ಧೆ ಮಾಡುತ್ತಾರೆ. ಒಂದು ವೇಳೆ ಸ್ಪರ್ಧೆಯಿಂದ ಹಿಂದಕ್ಕೆ ಸರಿದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಫೈನಲ್ ಎನ್ನಲಾಗುತ್ತಿದೆ.