ದೆಹಲಿ: ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು, ಅ.23ಕ್ಕೆ ವಿಚಾರಣೆ ಮುಂದೂಡಿದೆ.
ಆರೋಪಿಯ ಮನೆಯನ್ನು ಒಡೆಯುವ ನೋಟಿಸ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಮದು ನಡೆಸಿದ ಸುಪ್ರೀಂಕೋರ್ಟ್, ಇದು ರಾಜ್ಯ ಸರ್ಕಾರದ ಆಯ್ಕೆಗೆ ಬಿಟ್ಟ ವಿಚಾರವಾಗಿದೆ. ಒಂದು ವೇಳೆ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲು ಬಯಸುವುದಾದರೆ ಆಯ್ಕೆ ನಿಮ್ಮದು (ಸರ್ಕಾರ) ಎಂದು ಎಚ್ಚರಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ಬಿ.ಆರ್.ಗವಾಯಿ ಮತ್ತು ಜಸ್ಟೀಸ್ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ವಿಚಾರಣೆಯನ್ನು ಅ.23ಕ್ಕೆ ಮುಂದೂಡಿದೆ. ಜೊತೆಗ ಉತ್ತರಪ್ರದೇಶ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದಂತೆ ತಡೆ ನೀಡಿದೆ.