ಇಂದಿನಿಂದ ಹಾಸನಾಂಬ ದೇವಿಯ ದರ್ಶನ.! ಇಷ್ಟು ದಿನ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ.!

WhatsApp
Telegram
Facebook
Twitter
LinkedIn

 

ಹಾಸನ: ಇಂದು ಅಕ್ಟೋಬರ್ 24 ಮಧ್ಯಾಹ್ನ 12 ಗಂಟೆಗೆ ತೆರೆಯಲಾಗುವುದು. 9 ದಿನಗಳ ಕಾಲ ಭಕ್ತರಿಗೆ ದೇವಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ದೇವಾಲಯದಲ್ಲಿ ರಾಜಮನೆತನದ ನರಸಿಂಹರಾಜ ಅರಸು ಬಾಳೆಕಂದು ಕತ್ತರಿಸಿದ ನಂತರ ಗರ್ಭಗುಡಿಗೆ ಪೂಜೆ ಸಲ್ಲಿಸಿ ಬಾಗಿಲು ತೆರೆಯಲಾಗುವುದು. ನವೆಂಬರ್ 3ರಂದು ಪುನಃ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುವುದು. ದೇವಿ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಯವರ ಮತ್ತು ಎಲ್ಲಾ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ  ಬಾಗಿಲನ್ನು ತೆರೆಯಲಾಗುವುದು.

ಒಟ್ಟು 11 ದಿನದಲ್ಲಿ 9 ದಿನ ಮಾತ್ರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.  ದಿನದ 24 ಗಂಟೆಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಸಲಾಗಿದೆ. ಭಕ್ತರ ದರ್ಶನಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯಗಳಾದ ನೆರಳು, ಜರ್ಮನ್ ಟೆಂಟ್, ಬ್ಯಾರಿಕೇಡಿಂಗ್, ಫ್ಯಾನ್ಸ್, ಮ್ಯಾಟ್ ವ್ಯವಸ್ಥೆ ಕಲ್ಪಿಸಲಾಗಿದೆ.

ಹಾಸನಾಂಭ ದೇವಾಲಯದ ಆ್ಯಪ್ ರೂಪಿಸಿ ಲೋಕಾರ್ಪಣೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಾದ ಯು-ಟ್ಯೂಬ್, ಫೇಸ್ಬುಕ್ ಮೂಲಕವೂ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ದೇವಿ ದರ್ಶನದ ಕುರಿತು ಹಾಸನಾಂಭ ಆ್ಯಪ್ ಮೂಲಕ ಸಮಗ್ರ ಮಾಹಿತಿ ಪಡೆಯಲು ಕ್ರಮಕೈಗೊಳ್ಳಲಾಗಿದೆ.!

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon