ಕೊಲ್ಕತ್ತಾ :ಬಂಗಾಳಕೊಲ್ಲಿಯಲ್ಲಿ ಡಾನಾ ಚಂಡಮಾರುತ ರೂಪುಗೊಂಡಿದೆ. ಚಂಡಮಾರುತದ ಮುನ್ಸೂಚನೆಯಿಂದ ನೂರಾರು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೋಲ್ಕತ್ತಾ ಅಂತಾರಾಷ್ಟ್ರೀಯ ಎರಡು ವಿಮಾನಗಳನ್ನು 16 ಗಂಟೆಗಳವರೆಗೆ ಸ್ಥಗಿತಗೊಳಿಸಲಾಗಿದೆ. ಅಕ್ಟೋಬರ್ 25 ರವರೆಗೆ ಮೀನುಗಾರರು ಹೊರಗೆ ಹೋಗದಂತೆ ತಿಳಿಸಲಾಗಿದೆ ಮತ್ತು ಕೋಸ್ಟ್ ಗಾರ್ಡ್ ‘ಹೆಚ್ಚಿನ ಅಲರ್ಟ್’ ನಲ್ಲಿರುವಂತೆ ಸೂಚಿಸಲಾಗಿದೆ.10 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ.
ಮಂಗಳವಾರ ಸಂಜೆ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಮಾರ್ಪಟ್ಟಿದ್ದು, ಅಕ್ಟೋಬರ್ 25ರ ಮುಂಜಾನೆ ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯನ್ನು ದಾಟಿ 100-110 ಮೈಲಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಪೂರ್ವ ಭಾರತದಾದ್ಯಂತ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮನೆಗಳು, ರಸ್ತೆಗಳು, ಬೆಳೆಗಳು ಮತ್ತು ವಿದ್ಯುತ್ ಮಾರ್ಗಗಳಿಗೆ ಹಾನಿ ಮತ್ತು ಪ್ರವಾಹ ಮತ್ತು ಭೂಕುಸಿತಗಳ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.