ಮುಂಬೈ :ಅಕ್ಟೋಬರ್ 12 ರಂದು ಗುಂಡೇಟಿಗೆ ಬಲಿಯಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಪುತ್ರ ಜೀಶನ್ ಸಿದ್ದಿಕ್ ಅವರು ಶುಕ್ರವಾರ ಬೆಳಿಗ್ಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣವನ್ನು ಸೇರಿದ್ದಾರೆ. ಉಪಮುಖ್ಯಮಂತ್ರಿಯೂ ಆಗಿರುವ ಪವಾರ್ ಅವರ ಸಮ್ಮುಖದಲ್ಲಿ ಅವರು ಪಕ್ಷ ಸೇರಿದ್ದಾರೆ.
ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸಿದ ಆರೋಪದ ಮೇಲೆ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು. ಇದೀಗ ಶುಕ್ರವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಬಣಕ್ಕೆ ಕಾಲಿಟ್ಟಿದ್ದಾರೆ.
ಮಹಾರಾಷ್ಟ್ರದ ಮಾಜಿ ಸಚಿವರಾದ ಬಾಬಾ ಸಿದ್ದಿಕಿ ಅವರು 1999 ರಿಂದ 2009 ರವರೆಗೆ ಕಾಂಗ್ರೆಸ್ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಸ್ಥಾನವನ್ನು ವಿಸರ್ಜಿಸಿ ವಿಭಜನೆಯಾದ ನಂತರ ಅವರು 2009 ರಿಂದ 2014 ರವರೆಗೆ ವಂಡ್ರೆ ಪಶ್ಚಿಮವನ್ನು ಪ್ರತಿನಿಧಿಸಿದರು. ಈ ವರ್ಷದ ಆರಂಭದಲ್ಲಿ ಅವರು ಕಾಂಗ್ರೆಸ್ ತೊರೆದು ಅಜಿತ್ ಪವಾರ್ ಪಕ್ಷದ ಜೊತೆಯಾಗಿದ್ದಾರೆ.