ಬೆಳಗಾವಿ : ಸರ್ಕಾರಿ ಬಸ್ಸಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಹೊಡೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯರು ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಹತ್ತಿದ್ದಾರೆ. ಈ ವೇಳೆ ಬಸ್ನಲ್ಲಿ ಸೀಟ್ ನನ್ನದು ನನ್ನದು ಎಂದು ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ.
ಮೊದಲಿಗೆ ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ನಂತರ ಗಲಾಟೆ ತಾರಕ್ಕೇರಿ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದಾರೆ. ಜಗಳದ ವೇಳೆ ಅಡ್ಡ ಬಂದ ಬಾಲಕಿಗೂ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ.