ಕೋರ್ಟ್ ಅಮೂಲ್ಯ ಸಮಯ ಉಳಿಸಲು ಕರ್ನಾಟಕ ಹೈಕೋರ್ಟ್‌ ನ್ಯಾ. ನಾಗಪ್ರಸನ್ನ ಮತ್ತೊಂದು ಮಹತ್ವದ ಹೆಜ್ಜೆ

WhatsApp
Telegram
Facebook
Twitter
LinkedIn

ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ಷಿಪ್ರಗತಿಯ ವಿಚಾರಣೆ ಮತ್ತು ಮಹತ್ವದ ತೀರ್ಪುಗಳ ಮೂಲಕ ಗಮನಸೆಳೆದಿರುವ ನ್ಯಾಯಮೂರ್ತಿ ನಾಗಪ್ರಸನ್ನ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ಷಿಪ್ರ ಗತಿಯ ಪ್ರಕರಣಗಳ ವಿಲೇವಾರಿಯಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿರುವ ನ್ಯಾಯಮೂರ್ತಿ ನಾಗಪ್ರಸನ್ನ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತೀರ್ಪುಗಳಿಗೆ ಪ್ರಖ್ಯಾತಿ ಪಡೆದಿದ್ದಾರೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರು ದಿನವೊಂದಕ್ಕೆ 600ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ನಡೆಸಿದ್ದಲ್ಲದೆ ದಾಖಲೆಯ ಸಂಖ್ಯೆಯ ಪ್ರಕರಣಗಳ ಇತ್ಯರ್ಥ ಮೂಲಕ ನ್ಯಾಯಾಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಕಳೆದ ತಿಂಗಳಲ್ಲಿ 550ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆಯನ್ನು ಒಂದೇ ದಿನಕ್ಕೆ ನಡೆಸಿದ್ದಾರೆ. ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಪ್ರಕರಣಗಳಲ್ಲಿ ದೀರ್ಘವಾದ ತೀರ್ಪುಗಳ ಬಗ್ಗೆ ತೆರೆದ ನ್ಯಾಯಾಲಯದಲ್ಲಿ ಉಕ್ತಲೇಖನ ನೀಡದೇ ಇರಲು ನಿರ್ಧರಿಸಿದ್ದಾರೆ.

ಇದನ್ನು ಅವರೇ ಸ್ವತಃ ತೆರೆದ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪೊಂದನ್ನು ನೀಡಿದ್ದು, ಈ ತೀರ್ಪಿನಲ್ಲಿ ಬಹಿರಂಗ ನ್ಯಾಯಾಲಯಗಳಲ್ಲಿ ದೀರ್ಘವಾದ ತೀರ್ಪುಗಳಿಗೆ ಉಕ್ತಲೇಖನ ನೀಡುವುದನ್ನು ತಪ್ಪಿಸಿ ಎಂದು ನ್ಯಾಯಾಂಗ ಅಧಿಕಾರಿಗಳಿಗೆ ಸಲಹೆ ನೀಡಿತ್ತು.

ಸುಪ್ರೀಂ ಕೋರ್ಟ್‌ನ ಸಲಹೆಯನ್ನು ಪಾಲನೆ ಮಾಡಲು ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ತಮ್ಮ ನಿರ್ಧಾರಕ್ಕೆ ಸ್ಪಷ್ಟನೆ ನೀಡಿದ್ದಾರೆ.

ನ್ಯಾಯಾಂಗ ಮತ್ತು ಕೋರ್ಟ್‌ನ ಸಮಯ ಉಳಿಸಲು ದೀರ್ಘವಾದ ತೀರ್ಪುಗಳ ಉಕ್ತಲೇಖನವನ್ನು ತೆರೆದ ನ್ಯಾಯಾಲಯದಲ್ಲಿ ನೀಡದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇನ್ನು ಮುಂದೆ ದೀರ್ಘವಾದ ತೀರ್ಪುಗಳ ಉಕ್ತಲೇಖನವನ್ನು ತೆರೆದ ನ್ಯಾಯಾಲಯದಲ್ಲಿ ನೀಡುವುದಿಲ್ಲ. ಬದಲಿಗೆ ತಮ್ಮ ಕಚೇರಿಯಲ್ಲಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮಹತ್ವದ ಪ್ರಕರಣಗಳಲ್ಲಿ, ಅದರಲ್ಲೂ ಮುಖ್ಯವಾಗಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿ ಇದ್ದಾರೆ ಎಂಬುದು ಗಮನಾರ್ಹ ವಿಷಯ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon