ಮುಂಬೈ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

ಮುಂಬೈ : ಬಾಂದ್ರಾ ರೈಲು ನಿಲ್ದಾಣದ ಒಂದನೇ ಪ್ಲಾಟ್‌ಫಾರ್ಮ್ನಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತ ಉಂಟಾಗಿದ್ದು, 9 ಮಂದಿ ಗಾಯಗೊಂಡ ಘಟನೆ ಇಂದು ಸಂಭವಿಸಿದೆ.

ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ತೆರಳುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕರು ಯತ್ನಿಸಿದಾಗ ನೂಕುನುಗ್ಗಲು ಉಂಟಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಹೇಳಿದೆ. ಗಾಯಗೊಂಡ 9 ಮಂದಿಯ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 7 ಮಂದಿಯ ಆರೋಗ್ಯ ಸ್ಥಿರವಾಗಿದೆ. ಸದ್ಯ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮುಂಬೈ ಮಹಾನಗರ ಪಾಲಿಕೆಯ ಮಾಹಿತಿ ಪ್ರಕಾರ, ಬಾಂದ್ರಾದಿಂದ ಗೋರಖ್‌ಪುರಕ್ಕೆ ಹೋಗುವ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ರಲ್ಲಿ ಬಂದಿತ್ತು. ಈ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಆದ ಕಾರಣ ತಮ್ಮ ತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್‌ನಲ್ಲಿ ಜಮಾಯಿಸಿದ್ದರಿಂದ ಈ ಘಟನೆ ನಡೆದಿದೆ.

Advertisement

ಗಾಯಗೊಂಡವರನ್ನು ರೈಲ್ವೇ ಪೊಲೀಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರು ಸ್ಟ್ರೆಚರ್‌ಗಳಲ್ಲಿ ಎತ್ತಿಕೊಂಡು ಸಾಗಿಸಿದ್ದಾರೆ. ಸದ್ಯ ರೈಲ್ವೆ ನಿಲ್ದಾಣದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಬಿಎಂಸಿ ತಿಳಿಸಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement