ಬೆಂಗಳೂರು: ರಾಜ್ಯ ವಕೀಲರಿಗೆ ತಪ್ಪು ಸೂಚನೆ ನೀಡಿದ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರಿ ವಕೀಲರು ಸೂಕ್ತ ಸಹಕಾರ ನೀಡದಿದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ನೀಡಲಾಗುವುದು ಎಂದು ಎಚ್ಚರಿಸಿದೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪದಲ್ಲಿ ವಿನಾಯಕ್ ಯಾನೆ ವಿನಯ್ ಗೌಡ ಮರಿಗೌಡ ಎಂಬುವರ ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ವಿನಾಯಕ್ ಅವರು ಸುಪ್ರೀಂಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.