ಸೆಲ್ಫಿ ತೆಗೆದುಕೊಳ್ಳುವಾಗ ದುರ್ಘಟನೆ: ಸಾವನ್ನೇ ಗೆದ್ದು ಬಂದ ಎಂಜಿನಿಯರಿಂಗ್ ವಿದ್ಯಾರ್ಥಿನಿ!

ತುಮಕೂರು ತಾಲ್ಲೂಕಿನ ಮೈದಾಳ ಕೆರೆಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ವಿದ್ಯಾರ್ಥಿನಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಜೀವಂತವಾಗಿ ಪತ್ತೆಯಾಗಿದ್ದಾರೆ.

ನಗರದ ಎಸ್‌ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಗುಬ್ಬಿ ತಾಲ್ಲೂಕಿನ ಶಿವರಾಂಪುರ ನಿವಾಸಿ ಹಂಸ (20) ಎಂಬಾಕೆಯೇ ಸಾವನ್ನು ಗೆದ್ದು ಬಂದಿರುವ ವಿದ್ಯಾರ್ಥಿನಿ.

ವಿದ್ಯಾರ್ಥಿನಿ ಹಂಸ ಗೆಳತಿಯರ ಜತೆ ಮಂದಾರಗಿರಿ ಬೆಟ್ಟದ ವೀಕ್ಷಣೆಗೆ ನಿನ್ನೆ ಮಧ್ಯಾಹ್ನ ತೆರಳಿದ್ದು, ಅಲ್ಲೇ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ಬಳಿ ಹೋಗಿದ್ದಾರೆ. ಕೋಡಿ ನೀರು ಹರಿಯುವುದರಿಂದ ಖುಷಿಯಾದ ವಿದ್ಯಾರ್ಥಿನಿ ಕೋಡಿ ಬಳಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು, ಆ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

Advertisement

 

ನಿನ್ನೆ ಸಂಜೆ ಈ ಘಟನೆ ಸಂಭವಿಸಿದ್ದು, ಸುದ್ದಿ ತಿಳಿದ ಕೂಡಲೇ ಕ್ಯಾತ್ಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಗಾಗಿ ತೀವ್ರ ಕಾರ್ಯಾಚರಣೆ ನಡೆಸಿದ್ದರು. ಇಂದು ಬೆಳಗ್ಗೆ ಮತ್ತೆ ರಕ್ಷಣಾ ಕಾರ್ಯವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಕೈಗೊಂಡಾಗ ಕಲ್ಲಿನ ಪೊಟರೆಯಲ್ಲಿ ವಿದ್ಯಾರ್ಥಿನಿ ಸಿಲುಕಿಕೊಂಡಿರುವುದು ಪತ್ತೆಯಾಗಿದೆ. ಸದ್ಯ ವಿದ್ಯಾರ್ಥಿನಿ ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಸಂಜೆ ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಹಂಸ ಇಡೀ ರಾತ್ರಿ ಕಲ್ಲಿನ ಪೊಟರೆಯಲ್ಲಿ ಕಾಲ ಕಳೆದಿದ್ದು, ಪವಾಡ ಎಂಬಂತೆ ಜೀವಂತವಾಗಿ ಇರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

 

ವಿದ್ಯಾರ್ಥಿ ಹಂಸ, ಜೀವಂತವಾಗಿರುವ ವಿಷಯ ತಿಳಿದ ಕೂಡಲೇ ಎಸ್‌ಐಟಿ ಕಾಲೇಜಿನ ಆಡಳಿತ ಮಂಡಳಿ ಉಪನ್ಯಾಸಕರ ವೃಂದ ಹಾಗೂ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement