ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದೆ. ಆರ್ಥಿಕ ಇಲಾಖೆಯು ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. 615 ಸಬ್ ಇನ್ಸ್ಪೆಕ್ಟರ್ ಹಾಗೂ 3500 ಕಾನ್ಸ್ಟೇಬಲ್ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಮೂರು ತಿಂಗಳಿನಲ್ಲಿ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ವಿಶೇಷ ತನಿಖಾಧಿಕಾರಿ : 15
ಪೊಲೀಸ್ ಸಬ್ ಇನ್ಸ್ಪೆಕ್ಟರ್ (2022-23) : 300
ಪೊಲೀಸ್ ಸಬ್ ಇನ್ಸ್ಪೆಕ್ಟರ್ (2023-24) : 300
ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (ಕೆಎಸ್ಆರ್ಪಿ): 1500
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ /ಡಿಎಆರ್) : 2000
ಈ ಹುದ್ದೆಗಳಿಗೆ ಆರ್ಥಿಕ ಇಲಾಖೆಯು ಮಂಜೂರು ನೀಡಿದ್ದು, ಅಧಿಸೂಚನೆಯನ್ನು ಬರುವ ಮೂರು ತಿಂಗಳೊಳಗಾಗಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗೃಹ ಇಲಾಖೆಯಿಂದ ನೇಮಕಾತಿ ಜರೂರು ಆದೇಶ ಬಂದಲ್ಲಿ 40 ದಿನಗಳೊಳಗೆ ಸಹ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ವಿದ್ಯಾರ್ಹತೆ :
ಪೊಲೀಸ್ ಸಬ್ಇನ್ಸ್ಪೆಕ್ಟರ್ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (SRPC) (KSRP) : 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು.
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ / ಡಿಎಆರ್) : ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) : PUC ಪಾಸ್ ಆಗಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ 25 ವರ್ಷ ವಯಸ್ಸಾಗಿರಬೇಕು.