ಮೈಸೂರು: ಹೌದು ಈ ಬಾರಿ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯೂ ಪರೀಕ್ಷೆ ಬರೆಯುವ ಮತ್ತು ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲ ಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ನಡೆದ ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ರೈಲ್ವೆ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯುವ ಅವಕಾಶ ಕಲ್ಪಿಸಿರುವುದರಿಂದ ಕನ್ನಡಿಗರು ಹೆಚ್ಚು ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ರೈಲ್ವೆ ಇಲಾಖೆಯಿಂದ ವಾರ್ಷಿಕ ನೇಮಕಾತಿ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಜನವರಿಯಿಂದ ಇದುವರೆಗೆ 60,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ಸೋಮಣ್ಣ ತಿಳಿಸಿದ್ದಾರೆ