ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಪ್ರಕರಣ – ಆರೋಪಿ ಅರೆಸ್ಟ್

WhatsApp
Telegram
Facebook
Twitter
LinkedIn

ಮುಂಬೈ :ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಂದ್ರಾ ಪೂರ್ವದ ನಿವಾಸಿ ಅಜಂ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ.

2 ಕೋಟಿ ರೂ. ಬೇಡಿಕೆಯೊಡ್ಡಿ ನಟ ಸಲ್ಮಾನ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಬುಧವಾರ (ಅ.30) ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವೊಂದು ಬಂದಿತ್ತು. ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇದೀಗ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಎನ್‌ಸಿಪಿ ಶಾಸಕ ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ ಜೀಶನ್ ಸಿದ್ದಿಕಿ, ನಟ ಸಲ್ಮಾನ್ ಖಾನ್ ಇಬ್ಬರಿಗೂ ಜೀವ ಬೆದರಿಕೆ ಹೂಡಲಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಮಂಗಳವಾರ ನೋಯ್ಡಾದಲ್ಲಿ 20 ವರ್ಷದ ಗುರ್ಫಾನ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon