‘ಗ್ಯಾರಂಟಿ ಯೋಜನೆಗಳ ರದ್ದತಿಯ ಮೊದಲ ಹಂತದ ಪ್ರಕ್ರಿಯೆ’- ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು : ಶಕ್ತಿ ಯೋಜನೆ ಮೂಲಕ ಅವರನ್ನು ಬಲಾಢ್ಯರನ್ನಾಗಿ ಮಾಡಿದ್ದೀರಾ? ಸರ್ಕಾರಕ್ಕೆ ಈ ಯೋಜನೆಯನ್ನು ದೀರ್ಘಾವಧಿಗೆ ಮಾಡಲು ಸಾಧ್ಯ ಆಗುತ್ತಿಲ್ಲ. ಒಂದೊಂದಾಗಿ ಗ್ಯಾರಂಟಿಗಳನ್ನು ರದ್ದುಗೊಳಿಸಲು ಮೊದಲ ಹಂತಂದ ಪ್ರಕ್ರಿಯೆ ಇದು. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸುಳಿವಿನ ವಿಇಚಾರವಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಡಿಕೆ ಶಿವಕುಮಾರ್‌ಗೆ ಕನಸಿನಲ್ಲಿ ಬಂದು ಮಹಿಳೆಯರು ಹೇಳಿದ್ದಾರೋ? ಅಥವಾ ದೇವರು ಬಂದು ಜ್ಞಾನೋದಯ ಮಾಡಿದ್ದಾನೆಯೇ? ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಮರೆಯಾಗಿಸಲು ಇದೊಂದು ಕಾರಣ ಅಷ್ಟೆ ಎಂದಿದ್ದಾರೆ.

ಟ್ವೀಟ್ ಮೂಲಕ ಮಹಿಳೆಯರು ತಿಳಿಸಿದ್ದಾರೆಂದು ಹೇಳುತ್ತಾರೆ. ಇವರಿಗೆ ಈಗ ಜ್ಞಾನೋದಯ ಆಗಿದೆಯಾ. ಈವರೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸ ನಿಲ್ಲಿಸಿದ್ದರು, ಎಲ್ಲಾ ಸ್ಥಗಿತಗೊಳಿಸಿದ್ದರು. ತೆರಿಗೆಯವರಿಗೆ 10 ಸಾವಿರ ಕೋಟಿ ಹೆಚ್ಚಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ? ಎಂದು ಆಕ್ರೋಶ ಹೊರಹಾಕಿದ್ದಾರೆ.

Advertisement

ಗ್ಯಾರಂಟಿ ಹೆಸರು ಹೇಳಿಕೊಂಡು ಜನರಿಗೆ ಹೊರೆ ಮಾಡಿ, ಜನರ ಹಣ ಕಿತ್ತು ಕಾರ್ಯಕ್ರಮ ಮುಂದುವರಿಸುವುದರಲ್ಲಿ ಅರ್ಥ ಇಲ್ಲ. ಇದರಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಕೇವಲ ಖರ್ಚಾಗುತ್ತಿದೆ. ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆ ಭವಿಷ್ಯ ಹಾಳು ಮಾಡಬೇಡಿ ಎಂದು ತಿಳಿಸಿದ್ದಾರೆ.

ಅನ್ನ ಭಾಗ್ಯ ಯೋಜನೆಗೂ ಷರತ್ತು, ಮಾರ್ಗಸೂಚಿ ಅಳವಡಿಸಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಎಂದು ಕಾದು ನೋಡಿ. ನಮಗೆ ಗ್ಯಾರಂಟಿ ಬಗ್ಗೆ ಯಾವುದೇ ಹೊಟ್ಟೆ ಉರಿ ಇಲ್ಲ. ಗ್ಯಾರಂಟಿ ಬೇಕಾದರೆ ಡಬಲ್ ಮಾಡಿಕೊಳ್ಳಿ, ಆದರೆ ರಾಜ್ಯವನ್ನು ದೀವಾಳಿ ಮಾಡಬೇಡಿ ಎಂದು ಕಿಡಿಕಾರಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement