ಬೆಂಗಳೂರು: ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ ನಡೆಸಲು ಮಹಿಳೆಯರಿಂದಲೇ ಒತ್ತಡ – ಡಿಸಿಎಂ ಡಿಕೆಶಿ..!

WhatsApp
Telegram
Facebook
Twitter
LinkedIn

ಬೆಂಗಳೂರು : “ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್ದಾರೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಿನ್ನೆ ವಿಧಾನಸೌಧದ ಮುಂಭಾಗ ಐರಾವತ ಕ್ಲಬ್ ಕ್ಲಾಸ್ 2.0 ನೂತನ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಡಿಕೆಶಿ, “ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಶೀಘ್ರದಲ್ಲಿ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ” ಎಂದರು. ಈ ಹೇಳಿಕೆ ಕೊಡುವ ಮೂಲಕ ಶಕ್ತಿ ಯೋಜನೆ ಮರುಪರಿಶೀಲನೆ ಬಗ್ಗೆ ಸುಳಿವು ನೀಡಿದ್ರಾ ಎಂಬ ಚರ್ಚೆ ಶುರುವಾಗಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon