ತಾರಕಕ್ಕೇರಿದ ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಯ ಮೇಲೆ ಕಲ್ಲುತೂರಾಟ.!

WhatsApp
Telegram
Facebook
Twitter
LinkedIn

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಅನ್ಯ ಕೋಮಿನ ಮುಖಂಡರ ಮನೆಯ ಮೇಲೆ ಉದ್ರಿಕ್ತರು ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ. ಉದ್ರಿಕ್ತರ ಗುಂಪೊಂದು ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ.

ಘಟನೆಯ ಕುರಿತು ಹಾವೇರಿ ಎಸ್ಪಿ ಅಂಶು ಕುಮಾರ್, 15 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಲಾಟೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇವೆ ಎಂದರು. ಕಡಕೋಳ ಗ್ರಾಮದಲ್ಲಿ ರೂಟ್ ಮಾರ್ಚ್ ಮಾಡಲಾಗುತ್ತದೆ. ಭದ್ರತೆಗೆ ನಾಲ್ಕು ಕೆ ಎಸ್ ಆರ್ ಪಿ ತುಕಡಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಎಸ್ಪಿ ಅಂಶು ಕುಮಾರ್ ಮಾಹಿತಿ ನೀಡಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon