ಬೆಂಗಳೂರು : ರಿಷಬ್ ಶೆಟ್ಟಿ ಅವರಿಗೆ ದೇವರ ಪಾತ್ರವನ್ನು ಮಾಡುವ ಅವಕಾಶ ಒಲಿದುಬಂದಿದೆ. ಈಗ ರಿಷಬ್ ಶೆಟ್ಟಿ ಅವರು ಆಂಜನೇಯನಾಗಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರೀಕ್ಷೆ ಮೂಡಿಸಿರುವ ‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ನಟಿಸುತ್ತಿದ್ದಾರೆ. ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಚಿತ್ರತಂಡದಿಂದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ.
ಈ ವರ್ಷ ಆರಂಭದಲ್ಲಿ ‘ಹನುಮಾನ್’ ಸಿನಿಮಾ ಸೂಪರ್ ಹಿಟ್ ಆಯಿತು. ಸ್ಟಾರ್ ನಟರ ಸಿನಿಮಾಗಳಿಗೂ ಪೈಪೋಟಿ ನೀಡಿ ‘ಹನುಮಾನ್’ ಚಿತ್ರ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ನಿರ್ದೇಶಕ ಪ್ರಶಾಂತ್ ವರ್ಮಾ ಅವರು ಈಗ ಈ ಸಿನಿಮಾಗೆ ಸೀಕ್ವೆಲ್ ಮಾಡುತ್ತಿದ್ದಾರೆ. ಇದಕ್ಕೆ ‘ಜೈ ಹನುಮಾನ್’ ಎಂದು ಶೀರ್ಷಿಕೆ ಇಡಲಾಗಿದೆ. ಪ್ರಮುಖ ಪಾತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿರುವುದು ವಿಶೇಷ.