ಚಿತ್ರದುರ್ಗ : ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಜಿಲ್ಲಾಡಳಿತದಿಂದ ಪ್ರತಿ ವರ್ಷವೂ ಕೊಡಲ್ಪಡುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಬಿ.ಸಿ.ಅನಂತರಾಮು ಸೇರಿದಂತೆ ನಾನಾ ವಲಯಗಳಲ್ಲಿನ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರಶಸ್ತಿ ಪ್ರದಾನ ಮಾಡಿದರು.
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.