ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್ ದಾಖಲು

WhatsApp
Telegram
Facebook
Twitter
LinkedIn

ಹಾವೇರಿ :ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂಬುವುದಾಗಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಇದೀಗ ಈ ಟ್ವೀಟ್​ ಅನ್ನು ಅಳಿಸಿ ಹಾಕಲಾಗಿದೆ. ಈ ಕಾರಣದಿಂದ ಇದು ಸುಳ್ಳು ಮಾಹಿತಿ ಎಂದು ದೂರು ದಾಖಲಿಸಲಾಗಿದೆ.

ಮೃತನ ಬಗ್ಗೆ ಪಿಎಸ್‌ಐ ಆಡೂರ ಅವರು ತನಿಖೆ ಕೈಗೊಂಡು, ನಂತರ ಮೃತ ರೈತ ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ರವರಿಗೆ ಸಲ್ಲಿಸಿರುತ್ತಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ 05 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ ಎಂಬುವುದಾಗಿ ಹಾವೇರಿ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು. ಆದುದರಿಂದ ವಕ್ಫ್ ನೋಟಿಸ್ ಬಂದಿದ್ದೇ ರೈತನ ಆತ್ಮಹತ್ಯೆಗೆ ಕಾರಣ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ದ ಎಫ್‌ಐಆರ್‍ ದಾಖಲಿಸಲಾಗಿದೆ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon