ವಾರಣಾಸಿ :ಉತ್ತರ ಪ್ರದೇಶದ ವಾರಣಾಸಿ ಕ್ಯಾಂಟ್ ರೈಲು ನಿಲ್ದಾಣದಲ್ಲಿ ಗುರುವಾರ ಒಂದೇ ಮಾರ್ಗದಲ್ಲಿ ಎರಡು ರೈಲುಗಳು ಮುಖಾಮುಖಿಯಾಗಿವೆ. ಇದನ್ನು ಕಂಡ ವಿಶೇಷ ರೈಲಿನ ಲೋಕೋ ಪೈಲಟ್ (ರೈಲು ಚಾಲಕ) ಏಕಾಏಕಿ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದರು. ಅವರ ಬುದ್ಧಿವಂತಿಕೆಯಿಂದಾಗಿ ದೊಡ್ಡ ರೈಲು ಅಪಘಾತ ತಪ್ಪಿದೆ.
ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣ ಇಡೀ ಇಲಾಖೆಯಲ್ಲಿ ಆತಂಕ ಮನೆ ಮಾಡಿತ್ತು. ಹೆಚ್ಚುವರಿ ವಿಭಾಗೀಯ ರೈಲ್ವೇ ವ್ಯವಸ್ಥಾಪಕ ಲಾಲ್ಜಿ ಚೌಧರಿ ಮತ್ತು ನಿಲ್ದಾಣದ ನಿರ್ದೇಶಕ ಅರ್ಪಿತ್ ಗುಪ್ತಾ ಸ್ಥಳ ಪರಿಶೀಲನೆ ನಡೆಸಿದರು. ಈ ಸಂಪೂರ್ಣ ಪ್ರಕರಣದ ತನಿಖೆಗೆ ಜಂಟಿ ಸಮಿತಿಯನ್ನು ರಚಿಸಲಾಗಿದೆ.
ಚೈನ್ ಎಳೆಯಲು ಕಾರಣಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ತನಿಖೆಗಾಗಿ ಐವರು ಸದಸ್ಯರ ಜಂಟಿ ಸಮಿತಿಯನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ತಿಳಿಸಿದ್ದಾರೆ. 48 ಗಂಟೆಗಳಲ್ಲಿ ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.