ಧಾರವಾಡ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ಹೆಸರು | ಗ್ರಾಮ ಪಂಚಾಯತ್ ಧಾರವಾಡ ಜಿಲ್ಲಾ |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 32 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಧಾರವಾಡ ಜಿಲ್ಲಾ |
ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂಗಡ/ ಪ್ರವರ್ಗ-1 ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,382.52 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ
ಅಭ್ಯರ್ಥಿಗಳು ಪಿಯುಸಿಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇ.70 ರಷ್ಟು, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದ ಅಭ್ಯರ್ಥಿಗೆ ಶೇ. 20 ಮತ್ತು ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿದ ಅಭ್ಯರ್ಥಿಗೆ ಶೇ. 10 ರಷ್ಟು ಹೀಗೆ ಒಟ್ಟಾರೆಯಾಗಿ ಶೇ. 100 ರಷ್ಟು ಅಂಕಗಳನ್ನು ಸೇರಿ ಮೆರಿಟ್ ಆಧಾರಿತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 05 ನವೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04 ಡಿಸೆಂಬರ್ 2024