ಬೆಂಗಳೂರು: ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ನಿಗದಿಪಡಿಸಿರುವ ಕಾಲಮಿತಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಕಳೆದ 2019ರ ಏಪ್ರಿಲ್ ಒಂದಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಬೇಕಾಗಿದೆ. ಈಗಾಗಲೇ ಈ ನೋಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಸುಮಾರು ನಾಲ್ಕು ಬಾರಿ ವಿಸ್ತರಣೆ ಮಾಡಿದೆ.
ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.
ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ.
ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.