ರಾಜ್ಯ ಸರ್ಕಾರವು ಎಪಿಎಲ್ ರೇಷನ್ ಕಾರ್ಡ್‌ದಾರರಿಗೆ ಶಾಕ್ ನೀಡಿದೆ. ರೇಷನ್ ಕಾರ್ಡ್ ಇ-ಕೆವೈಸಿ ಮಾಡದ APL ಕಾರ್ಡ್ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ಎಪಿಎಲ್ ಕಾರ್ಡ್‌ದಾರರಿಗೆ ನೀಡುಲಾಗುತ್ತಿದ್ದ ರೇಷನ್ ಅನ್ನೂ ಸ್ಥಗಿತ ಮಾಡಲಾಗಿದೆ. ಹಾಗಾಗಿ ಸರ್ಕಾರ ಮತ್ತು ಆಹಾರ ಇಲಾಖೆಯ ವಿರುದ್ಧ APL ಕಾರ್ಡ್‌ದಾರರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಸುಮಾರು 25,62,562 APL ಕಾರ್ಡ್‌ಗಳಿದ್ದು, ನಕಲಿ ರೇಷನ್ ಕಾರ್ಡ್ ತಡೆಯುವ ನಿಟ್ಟಿನಲ್ಲಿ ಇ-ಕೆವೈಸಿ ಅನ್ನು ಕಡ್ಡಾಯ ಮಾಡಿತ್ತು.
ರೇಷನ್ ಕಾರ್ಡ್ ಗೆ ಇ-ಕೆವೈಸಿ ಮಾಡಿಸುವಂತೆ ಇಲಾಖೆ ನಿಯಮ ಜಾರಿ ಮಾಡಿದ್ದ ಸಂಧರ್ಭದಲ್ಲಿ ಶೇ. 80ರಷ್ಟು APL ಕಾರ್ಡ್‌ದಾರರು ಇ-ಕೆವೈಸಿ ಮಾಡಿಕೊಂಡಿದ್ದರು. ಶೇ. 20 ರಷ್ಟು ಕಾರ್ಡ್ ದಾರರು ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಇ-ಕೆವೈಸಿ ಮಾಡಿಕೊಂಡಿರಲಿಲ್ಲ. ಅಂತವರ ಕಾರ್ಡ್ ಗಳು ರದ್ದಾಗಿವೆ.
ರದ್ದಾಗಿರುವ ಕಾರ್ಡ್‌ದಾರರು ಏನೆಲ್ಲಾ ಸೇವೆಯಿಂದ ವಂಚಿತರಾಗಿರುತ್ತಾರೆ?
ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸಿಗುತ್ತಿರುವ ಹಣ ಸ್ಥಗಿತವಾಗುತ್ತದೆ, ಸರ್ಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ, ಸರಕಾರಿ ಸೌಲಭ್ಯಗಳು ಸಿಗಲ್ಲ, ಆಯುಷ್ಮಾನ್ ಭಾರತ ಯೋಜನೆ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ, ರಿಯಾಯಿತಿ ದರದಲ್ಲಿ ಅಕ್ಕಿ ಸಿಗುವುದಿಲ್ಲ, ಕೇಂದ್ರ ಸರ್ಕಾರವು ನೀಡುವ ಮೀಸಲಾತಿ ದೊರೆಯುದಿಲ್ಲ ಹೀಗೆ ಹಲವಾರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಹುದು.