ಬೆಂಗಳೂರು : ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಅವರ ನಿಶ್ಚಿತಾರ್ಥ ಕಾರ್ಯಕ್ರಮವು ಇಂದು ಸರಳವಾಗಿ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, ಮೈಸೂರಿನಲ್ಲಿ ಫೆ.16 ರಂದು ಮದುವೆ ನಡೆಯಲಿದೆ. ಡಾಲಿ ಧನಂಜಯ್ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾವಿ ಪತ್ನಿ ಧನ್ಯತಾ ಅವರೊಂದಿಗಿನ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು.
ಡಾಲಿ ಧನಂಜಯ್ ಹಾಗೂ ಧನ್ಯತಾ ಇಬ್ಬರು ಅನೇಕ ವರ್ಷಗಳಿಂದ ಪರಿಚಯಸ್ಥರು. ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಇವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ವಿವಾಹ ನಡೆಯಲಿದೆ. ಹಾಗೂ ಅದೇ ದಿನ ಅದೇ ಗ್ರೌಂಡ್ ನಲ್ಲಿ ಆರತಕ್ಷತೆ ನಡೆಯಲಿದೆ. ಇವರಿಬ್ಬರ ಮದುವೆಗೆ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಸಾಕ್ಷಿಯಾಗಲಿದ್ದಾರೆ.