ವಾಷಿಂಗ್ಟನ್ : ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ.
ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುತ್ತೇನೆ ಎಂದು ನಿಯೋಜಿತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದರು. ಈ ಮಧ್ಯೆ ಇನ್ನೆರಡು ತಿಂಗಳು ಅಧಿಕಾರದಲ್ಲಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ರಷ್ಯಾ ಮೇಲೆ ಕ್ಷಿಪಣಿ ದಾಳಿ ನಡೆಸಲು ಉಕ್ರೇನ್ಗೆ ಅನುಮತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಯುದ್ಧ ಮತ್ತಷ್ಟು ತೀವ್ರಗೊಳ್ಳಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.
ಈ ಹಿಂದೆ ಅಮೆರಿಕ ಉಕ್ರೇನ್ಗೆ ದೂರ ಸಾಗಬಲ್ಲ ಕ್ಷಿಪಣಿಯನ್ನು ನೀಡಿತ್ತು. ಆದರೆ ಈ ಕ್ಷಿಪಣಿಯನ್ನು ಬಳಸದಂತೆ ನಿಬ ನಿರ್ಬಂಧಿಸಿತ್ತು. ಎರಡು ತಿಂಗಳು ಅಧಿಕಾರದಲ್ಲಿರುವ ಜೋ ಬೈಡೆನ್ ಅವರು ತಮ್ಮ ಅಧಿಕಾರದ ಕೊನೆ ಅವಧಿಯಲ್ಲಿ ಕ್ಷಿಪಣಿಗೆ ವಿಧಿಸಿದ್ದ ನಿರ್ಬಂಧವನ್ನು ತೆಗೆದುಹಾಕಿದ್ದಾರೆ.
ಮುಂಬರುವ ದಿನಗಳಲ್ಲಿ ಉಕ್ರೇನ್ ತನ್ನ ಮೊದಲ ದೀರ್ಘ-ಶ್ರೇಣಿಯ ದಾಳಿಯನ್ನು ನಡೆಸಲು ಯೋಜಿಸಿದೆ. ಮೂಲಗಳ ಪ್ರಕಾರ 190 ಮೈಲುಗಳವರೆಗೆ (306 ಕಿಮೀ) ವ್ಯಾಪ್ತಿಯನ್ನು ಹೊಂದಿರುವ ಎಟಿಎಸಿಎಂಎಸ್ ರಾಕೆಟ್ಗಳನ್ನು ಬಳಸಿಕೊಂಡು ಉಕ್ರೇನ್ ಮೊದಲ ದಾಳಿಯನ್ನು ನಡೆಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.