ಜನಾಕ್ರೋಶದಿಂದ ಎಚ್ಚೆತ್ತ ಸರ್ಕಾರ, ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಸಿಎಂ ಆದೇಶ

WhatsApp
Telegram
Facebook
Twitter
LinkedIn

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಾ ವಿಚಾರ ಮಾತಿನ ಸಮರಕ್ಕೆ ವೇದಿಕೆ ಹಾಕಿಕೊಟ್ಟಿದೆ. ಒಂದರ್ಥದಲ್ಲಿ ಬಿಜೆಪಿ ನಾಯಕರಿಗೆ ಅಸ್ತ್ರವೇ ಸಿಕ್ಕಂತಾದ್ರೆ, ಸಚಿವರು ಇಲಾಖೆಯ ನಡೆಯನ್ನ ಸಮರ್ಥನೆ ಮಾಡಿಕೊಳ್ತಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರು ಸಹ ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.

 

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon