ದಾವಣಗೆರೆ : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೆÇೀಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ 25 ಸಾವಿರ ರೂಗಳಂತೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.14 ಕೊನೆಯದಿನವಾಗಿರುತ್ತದೆ. ಚನ್ನಗಿರಿ ತಾಲ್ಲೂಕಿನ ವ್ಯಾಪ್ತಿಯ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟವರ್ಗಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚನ್ನಗಿರಿ, ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08022261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚನ್ನಗಿರಿ ದೂ.ಸಂ:9945514253 ನ್ನು ಸಂಪರ್ಕಿಸಲು ಇಲಾಖೆಯ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.