‘ಭಾರತದಲ್ಲಿ 2ನೇ ಅತಿದೊಡ್ಡ ಹಾಲು ಉತ್ಪಾದಕ ರಾಜ್ಯ ಕರ್ನಾಟಕ’- ಸಿಎಂ

WhatsApp
Telegram
Facebook
Twitter
LinkedIn

ಬೆಂಗಳೂರು : ಕರ್ನಾಟಕವು ಭಾರತದಲ್ಲಿ ಎರಡನೇ ಅತಿದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಬ್ರ‍್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡಿ ಗುರುವಾರ ಮಾತನಾಡಿದ ಅವರು, ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿ ಗುಜರಾತ್ ಇದೆ. ರಾಜ್ಯದ 16 ಹಾಲು ಒಕ್ಕೂಟಗಳು ಪ್ರತಿದಿನ ಸುಮಾರು 1 ಕೋಟಿ ಲೀಟರ್ ಹಾಲನ್ನು ಉತ್ಪಾದಿಸುತ್ತವೆ. ಕರ್ನಾಟಕವು ನವದೆಹಲಿಗೆ ಪ್ರತಿದಿನ 2.5 ಲಕ್ಷ ಲೀಟರ್ ಹಾಲನ್ನು ಪೂರೈಸಲು ಪ್ರಾರಂಭಿಸಿದ್ದು, 6 ತಿಂಗಳಲ್ಲಿ ಇದನ್ನು 5 ಲಕ್ಷ ಲೀಟರ್‌ಗೆ ಹೆಚ್ಚಿಸುವ ಯೋಜನೆ ಹೊಂದಿದೆ ಎಂದಿದ್ದಾರೆ.

ಹಾಲಿನ ಉತ್ಪನ್ನಗಳಿಗೆ ಪ್ರಬಲ ಮಾರುಕಟ್ಟೆಯನ್ನು ಸೃಷ್ಟಿಸುವುದು ಡೇರಿ ಉದ್ಯಮದ ಬೆಳವಣಿಗೆ ಮತ್ತು ರೈತರ ಯೋಗಕ್ಷೇಮಕ್ಕೆ ನಿರ್ಣಾಯಕವಾಗಿದೆ. ಹೈನುಗಾರಿಕೆ ಕ್ಷೇತ್ರಕ್ಕೆ ನೀಡಿದ ಬಲವಾದ ಬೆಂಬಲವೇ ರಾಜ್ಯದ ಯಶಸ್ಸಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon