ಕರ್ನಾಟಕ ವಿಧಾನಸಭಾ ಉಪಚುನಾವಣೆ: ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಮತ ಎಣಿಕೆ ಆರಂಭ

WhatsApp
Telegram
Facebook
Twitter
LinkedIn

ಬೆಂಗಳೂರು : ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆದಿದ್ದು, ಇಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.

ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಕೆ ಆರಂಭವಾಗಿದೆ. ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಮತಯಂತ್ರಗಳ ಭದ್ರತಾ ಕೊಠಡಿ ತೆರೆಯಲಾಗಿದೆ. ಇಲ್ಲಿಯ ದೇವಗಿರಿ ಬಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ಶುರುವಾಗಿದೆ. ಮೊದಲಿಗೆ ಅಂಚೆ ಹಾಗೂ ಸೇವಾ ಮತದಾರರ ಮತ ಎಣಿಕೆ ಮಾಡಲಾಗುತ್ತದೆ. ನಂತರ ಇವಿಎಂಗಳ ಎಣಿಕೆ ಆರಂಭವಾಗಲಿದೆ.

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಗೆ ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಲೇಜಿನ 3 ಹಾಲ್ ನಲ್ಲಿ ಒಟ್ಟು 20 ಸುತ್ತಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಫಲಿತಾಂಶ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon