ಮಹಾರಾಷ್ಟ್ರ:ಎನ್ ಡಿ ಎ ಮೈತ್ರಿಕೂಟ ಭರ್ಜರಿ ಗೆಲುವಿನತ್ತ

WhatsApp
Telegram
Facebook
Twitter
LinkedIn

ಮಹಾರಾಷ್ಟ್ರ: ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು 224 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 53 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಶಕ್ತವಾಗಿದೆ. ಇತರೆ ಪಕ್ಷ ಹಾಗೂ ಪಕ್ಷೇತರರು 11 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.ಜಾರ್ಖಂಡ್‌ನಲ್ಲಿ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಆರ್‌ಜೆಡಿ ಪಕ್ಷವು ಐದರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಮಹಾಯುತಿಯಲ್ಲಿ ಸಂಭ್ರಮ ಮನೆ ಮಾಡಿದೆ. ಬಿಜೆಪಿ, ಎನ್‌ಸಿಪಿ ಹಾಗೂ ಶಿವಸೇನಾ ನೇತೃತ್ವದ ಮಹಾಯುತಿಯು ಭಾರೀ ಬಹುತಮದೊಂದಿಗೆ ಸರ್ಕಾರ ರಚನೆಯ ಹೊಸ್ತಿಲಲ್ಲಿದೆ. ಜಾರ್ಖಂಡ್‌ನಲ್ಲಿ ಇಂಡಿಯಾ ಬಣ ಮುನ್ನಡೆ ಕಾಯ್ದುಕೊಂಡಿದೆ.

ಮಹಾರಾಷ್ಟ್ರದಲ್ಲಿ 222 ಕ್ಷೇತ್ರಗಳಲ್ಲಿ ಮಹಾಯುತಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ ವಿಕಾಸ ಅಘಾಡಿಯ ಪ್ರಮುಖರ ಹಿನ್ನಡೆ ಅನುಭವಿಸಿದ್ದಾರೆ. ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟ 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಜಾರ್ಖಂಡ್‌ನ 81 ಕ್ಷೇತ್ರಗಳ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಇತ್ತೀಚಿನ ವರದಿಗಳ ಪ್ರಕಾರ ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿಕೂಟದ ಇಂಡಿಯಾ ಬಣ 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೊದಲು ರಾಜ್ಯದಲ್ಲಿ ಎನ್‌ಡಿಎ ಬಣ ಮುಂದಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯು 211 ಕ್ಷೇತ್ರಗಳಲ್ಲಿ ಮುಂದಿದೆ. ಮಹಾ ವಿಕಾಸ ಅಘಾಡಿ 60 ಕ್ಷೇತ್ರಗಳಲ್ಲಿ ಮುಂದಿದೆ.81 ಕ್ಷೇತ್ರಗಳ ಜಾರ್ಖಂಡ್ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಅಗತ್ಯವಿರುವ 41 ಕ್ಷೇತ್ರಗಳ ಗಡಿಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ದಾಟಿದೆ. ‘ಇಂಡಿಯಾ’ ಬಣ 38 ಕ್ಷೇತ್ರಗಳಲ್ಲಿ ಮುಂದಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿಯು 205 ಕ್ಷೇತ್ರಗಳಲ್ಲಿ ಮುಂದಿದ್ದು, ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಎಂವಿಎ 68 ಕ್ಷೇತ್ರಗಳಿಗೆ ಕುಸಿದಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon