ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಖಡಕ್ ಆದೇಶ ಹೊರಡಿಸಿದೆ.
ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದು, ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ.
ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು ಆದೇಶಿಸಿದೆ.
- ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ.
- ನೋಡಲ್ ಅಧಿಕಾರಿ ರವರು ಉಸ್ತುವಾರಿ ವಹಿಸಿದ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಪ್ರಗತಿಯನ್ನು ಖುದ್ದು, ಮೇಲ್ವಿಚಾರಣೆಯನ್ನು ಮಾಡುವುದು.
- ಹೀಗೆ ಮುರುಸ್ತಾಪನೆಗೊಂಡಿರುವ PHH ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಹಂಚಿಕೆಯನ್ನು NIC ಸಹಯೋಗದೊಂದಿಗೆ ದಿನಾಂಕ: 25/11/2024 ರೊಳಗೆ ಜಂಟಿ ನಿರ್ದೇಶಕರು (ಸಂ.ವಿ) ರವರು ಕ್ರಮವಹಿಸಬೇಕು.
- ಕುಟುಂಬ ತಂತ್ರಾಂಶದಿಂದ ಬಂದಿರುವ ಆದಾಯ ತೆರಿಗೆ ಪಾವತಿದಾರರು ಪಡಿತರ ಚೀಟಿಗಳ ರದ್ದತಿಯಲ್ಲಿ ಕೇವಲ ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಗಳನ್ನು ಮಾತ್ರವೇ ರದ್ದು/ಅಮಾನತ್ತು/ಪರಿವರ್ತನೆ ಆಗುವಂತೆ ಆಯಾ ಜಂಟಿ/ಉಪ ನಿರ್ದೇಶಕರು ರವರು ಕ್ರಮವಹಿಸತಕ್ಕದ್ದು, ಇದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಪಡೆದು ಪ್ರತಿಯೊಂದು ಪಡಿತರ ಚೀಟಿದಾರರ ದಾಖಲೆಗಳನ್ನು ಕಡತಗಳಲ್ಲಿ ಇರಿಸುವುದು.
- ಈ ಎಲ್ಲಾ ಕಾರ್ಯಗಳನ್ನು ಜಾಗೃತಿ ವಹಿಸಿ ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯ ವಾಗದಂತೆ ಕ್ರಮ ವಹಿಸುವುದು.
- ದಿನಾಂಕ: 25/11/2024 ರೊಳಗೆ ಮೂರ್ಣಗೊಳಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.