ಆದಾಯ ತೆರಿಗೆ ಪಾವತಿದಾರರಿಗೆ ಗೃಹಲಕ್ಷ್ಮಿ 2000 ರೂ. ಯೋಜನೆ ಹಣ ಸಿಗುವುದಿಲ್ಲ. ಆದಾಯ ತೆರಿಗೆ ಪಾವತಿ ವ್ಯಾಪ್ತಿಯಿಂದ ಹೊರ ಉಳಿದವರಿಗೆ ಹಣ ಸಿಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ
ಹೆಬ್ಬಾಳ್ಕರ್ ಹೇಳಿಕೆ ಕೊಟ್ಟಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಪಿಎಲ್, ಬಿಪಿಎಲ್ ಪಡಿತರ ಚೀಟಿ ಹೊಂದಿದ ಇಬ್ಬರಿಗೂ ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಸ್ಪಷ್ಟಪಡಿಸಿದರು.