ಚಿತ್ರದುರ್ಗ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್‍ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಹಾಗೂ ಸ್ವ ಸಹಾಯಕ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುವುದರಿಂದ ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನಿಗಧಿತ ಅರ್ಜಿ ನಮೂನೆ ಪಡೆದುಕೊಂಡು ಭರ್ತಿ ಮಾಡಿ ಇದೇ ಜೂನ್ 30ರ ಸಂಜೆ 5.30ರ ಅವಧಿಯ ಒಳಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಖುದ್ದಾಗಿ ಸಲ್ಲಿಸಬೇಕು.
ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ, ಸ್ವ ಹಸ್ತಾಕ್ಷರದಿಂದ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಚಿತ್ರದುರ್ಗ ರವರಿಗೆ ಸಲ್ಲಿಸಬೇಕು ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.