‘ಕೋಟಿ ಭಕ್ತರ ಬೇಡಿಕೆ ಚಾಂಮುಂಡೇಶ್ವರಿ ತಾಯಿಗೆ ಚಿನ್ನದ ರಥ ನಿರ್ಮಾಣ’ – ಸಿಎಂ ಸಿದ್ದರಾಮಯ್ಯ ಆದೇಶ

WhatsApp
Telegram
Facebook
Twitter
LinkedIn

ಮೈಸೂರು :ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಹಿನ್ನೆಲೆ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶ ನೀಡಿದ್ದಾರೆ. ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶಿಸಿದ್ದಾರೆ.

ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆಯಾಗಿತ್ತು. ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು. ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು ಎಂದು ಹೇಳಲಾಗಿತ್ತು.

ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕವಾದ ಹುಂಡಿಯನ್ನು ಇಡಬೇಕು. ಭಕ್ತರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂಬುವುದಾಗಿ ಮನವಿ ಮಾಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon