ಮೊರೆನಾ :ಮಧ್ಯಪ್ರದೇಶದ ಮೊರೆನಾ ನಗರದಲ್ಲಿ ಮಧ್ಯರಾತ್ರಿಯ ಸುಮಾರಿಗೆ ಮೂರು ಮನೆಗಳು ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಥೋಡ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಹೇಳಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಫೋರೆನ್ಸಿಕ್ ತಂಡವೂ ಸ್ಥಳದಲ್ಲಿದೆ ಎಂದು ಅವರು ಹೇಳಿದ್ದಾರೆ.