ಬೆಂಗಳೂರು: ಪ್ರಿಯಕರನೋರ್ವ ತನ್ನ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದಿರಾ ನಗರದ ರಾಯಲ್ ಇನ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಕೊಲೆಯಾದ ಮಾಯಾ ಗೊಗಾಯ್ ಅಸ್ಸಾಂ ಮೂಲದ ಯುವತಿಯಾಗಿದ್ದಾಳೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮಾಯಾ ರಾಯಲ್ ಇನ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆಕೆಗೆ ಚಾಕುವಿನಿಂದ ಇರಿದು ಪ್ರಿಯಕರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಇಂದಿರಾ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಂತಕ ಯಾರು? ಕೊಲೆ ಮಾಡಿದ್ದು ಯಾಕೆ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.