ಬೆಳಗಾವಿ :ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಫೋಟೊಗ್ರಾಫರ್ ಕಿಡ್ನ್ಯಾಪ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಫೋಟೋಗ್ರಾಫರ್ ಉಮೇಶ್ ಹೊಸೂರು ಎಂಬುವವರು ಅಪಹರಣವಾಗಿ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಬೆಳಗಾವಿ ನಗರಕ್ಕೆ ಬಂದಿದ್ದರು. ಕಿಡ್ನಾಪ್ ಮಾಡಿ ಕಾರು ನಿಲ್ಲಿಸಿ ರಾಡ್ನಿಂದ ಹಲ್ಲೆ ಮಾಡಿ ಬಿಟ್ಟು ಹೋಗಿದ್ದಾರೆ. ಬೈಲಹೊಂಗಲ ಖಾಸಗಿ ಆಸ್ಪತ್ರೆಯಲ್ಲಿ ಫೋಟೋಗ್ರಾಫರ್ ಉಮೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೇಸ್ ದಾಖಲಾಗ್ತಿದ್ದಂತೆ ಇಬ್ಬರು ಮಹಿಳೆಯರು ಸೇರಿ ಎಂಟು ಜನರನ್ನು ಬಂಧಿಸಲಾಗಿದೆ. ವೃತ್ತಿ ವೈಷಮ್ಯದಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳಾದ ವಿಕ್ಕಿ, ಪ್ರವೀಣ್ ಉಮರಾಣಿ, ಬಸವರಾಜ ನರಟ್ಟಿ ಸೇರಿ ಎಂಟು ಜನರ ಬಂಧನವಾಗಿದೆ.