ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9 ಕೋಟಿ ರೂ. ಲಾಭಾಂಶದ ಚೆಕ್ಕನ್ನು ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ಕನ್ನು ಸ್ವೀಕರಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ನೀಲಪ್ಪ ಶಿವಣ್ಣನವರ, ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಶಿರೂರು ಮತ್ತಿತರರು ಉಪಸ್ಥಿತರಿದ್ದರು.