ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟು 58,929 BBS ಆಸ್ತಿ ವಿವಾದಗಳು ಬೆಳಕಿಗೆ ಬಂದಿದ್ದು, ಅದರಲ್ಲಿ 869 ಕರ್ನಾಟಕದಲ್ಲಿವೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಲೋಕಸಭೆಯಲ್ಲಿ ಬಸವರಾಜ ಬೊಮ್ಮಾಯಿ ಕೇಳಿರುವ ಪ್ರಶ್ನೆಗೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.
ವಕ್ಫ್ ಕಾಯಿದೆಯ ಕಲಂ 54 ಮತ್ತು 55ರ ಪ್ರಕಾರ ರಾಜ್ಯ ವಕ್ಫ್ ಮಂಡಳಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಕ್ಫ್ ಆಸ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಅಧಿಕಾರವಿದೆ ಎಂದು ಸ್ಪಷ್ಟನೆ ನೀಡಿದರು.