ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದಿನಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.