ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಮಾಡಿದ್ದು, ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸ್ಥಳ ನಿರೀಕ್ಷಣೆಯಲ್ಲಿರುವ ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ
ಸುರೇಕಾ : ಕೆಎಎಸ್ (ಹಿ.ಶ್ರೇ) ಅಧಿಕಾರಿ- ಕುಲಸಚಿವರು (ಆಡಳಿತ) ಬೀದರ್ ವಿಶ್ವವಿದ್ಯಾಲಯ ಬೀದರ್-ಹುದ್ದೆಗೆ, ರಜನಿಕಾಂತ : ಕೆಎಎಸ್ (ಕಿ.ಶ್ರೇ) ಅಧಿಕಾರಿ- ಆಡಳಿತ ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು-ಹುದ್ದೆಗೆ ವರ್ಗಾವಣೆ ಗೊಳಿಸಿ ಸರಕಾರ ಆದೇಶ ಹೊರಡಿಸಿದೆ.