ತೆಲಂಗಾಣ:. ನಾಲ್ಕನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮಂಚಿಯಾಲ ಜಿಲ್ಲೆಯ ಜನ್ನಾರಂ ಮಂಡಲದ ರೊಟಿಗೂಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 10 ವರ್ಷದ ಸಮನ್ವಿತಾ ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಎಂದಿನಂತೆ ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ ಸಮನ್ವಿತಾ, ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ತಂದೆ ನಗರಾಜು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಚಿಕಿತ್ಸೆ ಫಲಿಸದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.