ಚೆನ್ನೈ : ಫೆಂಗಲ್ ಚಂಡಮಾರುತತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.
ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಅಬುದಾಬಿಯಿಂದ ಚೆನ್ನೈಗೆ ತೆರಳಬೇಕಿದ್ದ ಇಂಡಿಗೋ ವಿಮಾನವನ್ನು ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರಿಗೆ ತಿರುಗಿಸಲಾಗಿದೆ.
ಚಂಡಮಾರುತದಿಂದಾಗಿ ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.