ಚೆನ್ನೈ : ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಭೂಕುಸಿತ ಉಂಟಾಗಿ ಮೂವರು ಸಾವನ್ನಪ್ಪಿದ್ದಾರೆ.ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಈ ಕಾರಣದಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯ ಹಲವು ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಫೆಂಗಲ್ ಚಂಡಮಾರುತ ಹಾದು ಹೋಗಲಿದ್ದು, ಗಂಟೆಗೆ 70-80 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇಂದು ರಾತ್ರಿ 7ಗಂಟೆವರೆಗೆ ಚೆನ್ನೈ ವಿಮಾನ ನಿಲ್ದಾಣ ಮುಚ್ಚಲಿದ್ದು, ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಫೆಂಗಲ್ ಪ್ರಬಲ ಚಂಡಮಾರುತದಿಂದ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ವಾರದ ಆರಂಭದಲ್ಲಿ ಶ್ರೀಲಂಕಾದ ಕರಾವಳಿಯಲ್ಲಿ ಫೆಂಗಲ್ ಚಂಡಮಾರುತದಿಂದ ಆರು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಬಲಿಯಾಗಿದ್ದಾರೆ.