ಬೀದರ್: ಯತ್ನಾಳ್ ಒಬ್ಬ ಜೋಕರ್, ಮಾನಸಿಕ ರೋಗಿಯಾಗಿದ್ದು ಅವರು ಮಾನಸಿಕ ತಜ್ಞರ ಹತ್ತಿರ ಚಿಕಿತ್ಸೆ ಪಡೆದುಕೊಳ್ಳೋದು ಸೂಕ್ತ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ.
ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯತ್ನಾಳ್ ಅವರು ಬಸವಣ್ಣ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮೂಲಕ ರಣಹೇಡಿ ಎಂಬಂತೆ ಬಿಂಬಿಸುತ್ತಿದ್ದಾರೆ.
RSS ಮನವೊಲಿಸಲು ಈ ರೀತಿ ಹೇಳಿಕೆಗಳನ್ನು ಅವರು ನೀಡುತ್ತಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.