ಬೆಂಗಳೂರು: ಬಿಜೆಪಿಯೊಳಗಿನ ಬಣ ಕಿತ್ತಾಟ ಜೋರಾಗಿದ್ದು, ಕೊನೆಗೂ ಹೈಕಮಾಂಡ್ ಮಧ್ಯಪ್ರವೇಶಿಸಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಹೈಕಮಾಂಡ್ ನೋಟಿಸ್ ನೀಡಿದೆ. 10 ದಿನಗಳೊಳಗೆ ಉತ್ತರ ಕೊಟ್ಟಿಲ್ಲ ಎಂದರೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.
ಕಳೆದ ಕೆಲ ದಿನಗಳಿಂದ ಬಣ ಕಿತ್ತಾಟ ಜೋರಾಗಿದ್ದು, ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಯತ್ನಾಳ್ ವಾಗ್ದಾಳಿ ನಡೆಸುತ್ತಿದ್ದರು. ಅಲ್ದೇ ಪಕ್ಷ ರಾಜ್ಯಾಧ್ಯಕ್ಷರ ಗಮನಕ್ಕೆ ತರದೇ ಪ್ರತ್ಯೇಕ ಹೋರಾಟವನ್ನೂ ಬಸನಗೌಡ ಪಾಟೀಲ್ ಯತ್ನಾಳ್ ಕೈಗೊಂಡಿದ್ದರು.
ಈ ಹಿನ್ನೆಲೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಇನ್ನು ಯತ್ನಾಳ್ ಅವರು ಮೊನ್ನೆಯಷ್ಟೇ ದೆಹಲಿ ಹೋಗಿ ವರಿಷ್ಠರ ಭೇಟಿ ಮಾಡಿ ಬಂದಿದ್ದರು.